ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ
ಸಾರ್ವಜನಿಕ ಆರೋಗ್ಯದ ದೊಡ್ಡ ಬೆದರಿಕೆಗಳಲ್ಲಿ ತಂಬಾಕು ಸೇವನೆಯು ಒಂದಾಗಿದೆ, ಇದು ವಿಶ್ವದಾದ್ಯಂತ ವಷಕ್ಕೆ 8 ದಶಲಕ್ಷಕ್ಕೂ ಹೆಚ್ಚೂ ಜನರನ್ನು ಕೊಲ್ಲುತ್ತಿದೆ ಹಾಗೂ ಪ್ರತ್ಯಕ್ಷ ಧೂಮಪಾನ ಮಾಡುವುದರಿಂದ ಸುಮಾರು ದಶಲಕ್ಷಗಳಷ್ಟು ಜನರು ಸಾವಿಗೀಡಾದರೆ ಧೂಮಪಾನ ಮಾಡದವರು ಪರೋಕ್ಷ ಧೂಮಪಾನಕ್ಕೆ ಬಲಿಯಾಗಿ 1.2 ದಶಲಕ್ಷ ಜನರು ಸಾವಿಗೀಡಾಗುತ್ತಿದ್ದಾರೆ ವಿಶ್ವಾದಾದ್ಯಂತ ಇರುವ 1.1 ಶತಕೋಟಿ ಧೂಮಪಾನಿಗಳಲ್ಲಿ ಸುಮಾರು 80% ರಷ್ಟು ಜನ ಕಡಿಮೆ ಮತ್ತು ಮಧ್ಯಮ ಆದಾಯದ ದೇಶಗಳಲ್ಲಿ ವಾಸಿಸುತ್ತಿದ್ದಾರೆ. ಅಲ್ಲಿ ತಂಬಾಕು ಸಂಬಂಧಿತ ಕಾಯಿಲೆ ಮತ್ತು ಸಾವಿನ ಪ್ರಮಾಣ ಹೆಚ್ಚಾಗಿದೆ ಮನೆಯ ದೈನಂದಿನ ಆಹಾರ ಮತ್ತು ಮೂಲಭೂತ ಅಗತ್ಯಗಳಿಗೆ ವೆಚ್ಚಗಳನ್ನುಮಾಡುವ ಬದಲಾಗಿ ತಂಬಾಕಿಗೆ ಖಚ್ಚು ಮಾಡುವ ಮೂಲಕ ತಂಬಾಕು ಬಳಕೆಯು ಬಡತನಕ್ಕೆ ಕಾರಣವಾಗಿದೆ.
ಭಾರತ ಸರಕಾರ 2007-08ರಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಅವಧಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು (ಎನ್.ಟಿ.ಸಿ.ಪಿ) ಪ್ರಾರಂಬಿಸಿತು. ವಿಶ್ವ ವಯಸ್ಕರ ತಂಬಾಕು ಸಮೀಕ್ಷೆ (ಜಿ.ಎ.ಟಿ.ಎಸ್) 2009-10ರಂತೆ ತಂಬಾಕು ಬಳಕೆಯ ಪ್ರಮಾಣಯನ್ನು ಸೂಚಿಸುತ್ತದೆ. 12ನೇ ಪಂಚವಾರ್ಷಿಕ ಯೋಜನೆಯ ಅಂತ್ಯದ ವೇಳೆಗೆ ತಂಬಾಕು ಬಳಕೆಯನ್ನು 5% ರಷ್ಟು ಕಡಿಮೆ ಮಾಡುವ ಗುರಿಯನ್ನು 12ನೇ ಪಂಚವಾರ್ಷಿಕ ಯೋಜನೆಯಲ್ಲಿ ಹಾಕಿಕೊಳ್ಳಲಾಗಿತ್ತು. ಜಿ.ಎ.ಟಿ.ಎಸ್ 2ನೇ ಸಮೀಕ್ಷೆಯ ಪ್ರಕಾರ ತಂಬಾಕು ಬಳಸುವವರ ಸಂಖ್ಯೆ ಸುಮಾರು 81 ಲಕ್ಷ (8.1 ದಶ ಲಕ್ಷ ) ಕಡಿಮೆಯಾಗಿದೆ.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಉದ್ದೇಶಗಳು:
- ತಂಬಾಕು ಸೇವನೆಯ ಹಾನಿಕಾರಕ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವುದು.
- ತಂಬಾಕು ಉತ್ಪನ್ನಗಳ ಸೇವನೆ, ಉತ್ಪಾದನೆ ಮತ್ತು ಪೂರೈಕೆಯನ್ನು ಕಡಿಮೆ ಮಾಡುವುದು.
- ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ(ಕೋಟ್ಪಾ)2003 ರನ್ನು ಪರಿಣಾಮಕಾರಿಯಾಗಿ ಜಾರಿ ಮಾಡುವುದು.
- ತಂಬಾಕು ಬಳಕೆಯನ್ನು ತ್ಯಜಿಸಲು ಸೇವೆಯನ್ನು ಒದಗಿಸುವುದು.
- ತಂಬಾಕು ನಿಯಂತ್ರಣ ಮತ್ತು ತಡೆಗಟ್ಟುವಿಕೆಗಾಗಿ ವಿಶ್ವ ಆಯೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿಯ ಕಾರ್ಯತಂತ್ರಗಳನ್ನು ಅನುಷ್ಠಾನ ಮಾಡುವುದು.