ಮುಚ್ಚಿ

ಶಿಕ್ಷಣ

ನಮ್ಮ ರಾಜ್ಯದ ಎಲ್ಲಾ ಮಕ್ಕಳನ್ನು ಉತ್ತಮ ಮಾನವರಾಗಲು, ಸಾಮಾಜಿಕವಾಗಿ ಜವಾಬ್ದಾರಿಯುತ ನಾಗರಿಕರಾಗಲು ಮತ್ತು ಅವರು ಏನೇ ಶ್ರೇಷ್ಠತೆಯನ್ನು ಸಾಧಿಸಲು ಸಕ್ರಿಯಗೊಳಿಸಲು ಮತ್ತು ರಚನಾತ್ಮರಾಗಲು ಅವಶ್ಯವಾಗಿ ಬೇಕಾದ ನಿಗದಿತ ಜ್ಞಾನ, ಕೌಶಲಗಳು ಮತ್ತು ಮೌಲ್ಯಗಳನ್ನು ಹೊಂದಲು ಸಜ್ಜುಗೊಳಿಸುವುದೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಮುಖ ಗುರಿಯಾಗಿದೆ.

ಮಧ್ಯಾಹ್ನ ಉಪಹಾರ ಯೋಜನೆ: ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಒಪ್ಪಂದದಲ್ಲಿ ಘೋಷಿಸಲ್ಪಟ್ಟಿರುವಂತೆ ಪ್ರತಿಯೊಬ್ಬ ಹಸಿದ ಮಗುವಿಗೂ ಆಹಾರವನ್ನು ಒದಗಿಸಬೇಕಾಗಿದೆ. ಮಧ್ಯಾಹ್ನ ಉಪಹಾರ ಯೋಜನೆಯು ಒಂದು ಪ್ರತಿಷ್ಠಿತ ಯೋಜನೆಯಾಗಿದ್ದು, ಮಕ್ಕಳು ಆರೋಗ್ಯಪೂರ್ಣವಾಗಿ ಶಕ್ತಿವಂತರು ಹಾಗೂ ದೃಢಕಾಯರಾಗಿ ಬೆಳೆಯಲು ಒಂದು ಸದವಕಾಶ ಕಲ್ಪಿಸುವ ಬದ್ಧತೆಯಿಂದ ಕೂಡಿದ್ದು, ಸಹಕಾರಿಯಾಗಿದೆ. ಸದರಿ ಕಾರ್ಯಕ್ರಮದ ಪ್ರಮುಖ ಉದ್ದೇಶವು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಹಸಿವು ನೀಗಿಸಿ ತನ್ಮೂಲಕ ಅವರ ಕಲಿಕಾ ಸಾಮರ್ಥ್ಯಗಳನ್ನೂ ಮತ್ತು ಸಾಧನೆಗಳನ್ನು ಹೆಚ್ಚಿಸುವುದಾಗಿದೆ.

ಸಂಪರ್ಕಿಸಿ:

ಉಪನಿರ್ದೇಶಕರು(ಆಡಳಿತ),
ವಿಜಯಪುರ ಫೋನ್: 08352-250151
ಫ್ಯಾಕ್ಸ್: 08352-244701
ಇಮೇಲ್: ddpi[dot]edu[dot]karbjp[at]nic[dot]in

ಹೆಚ್ಚಿನ ಮಾಹಿತಿಗಾಗಿ: http://schooleducation.kar.nic.in/